6 ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು. 7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು. 8 ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
10 ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?