Pular para o conteúdo
Publicidade

ರೋಮಾಪುರದವರಿಗೆ 6:1,2,6,11-14

ಪಾಪಕ್ಕೆ ಸತ್ತು ಕ್ರಿಸ್ತ ಯೇಸುವಿನಲ್ಲಿ ಜೀವಂತನಾಗಿರುವುದು

1 ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ? 2 ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?

6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.

11 ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ. 12 ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ. 13 ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ. 14 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

Estes versículos te tocaram? Ore agora!

+581 estão orando agora.

Junte-se à corrente de oração.