9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ. 10 ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.
11 ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.