15 ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ. 18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. 19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.
24 ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು? 25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ!
ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.