ಜಯಶಾಲಿಗಳಿಗಿಂತಲೂ ಹೆಚ್ಚಿನವರು
31 ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು? 32 ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ? 33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. 34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.