Pular para o conteúdo
Publicidade

ರೋಮಾಪುರದವರಿಗೆ 8:31-39

ಜಯಶಾಲಿಗಳಿಗಿಂತಲೂ ಹೆಚ್ಚಿನವರು

31 ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು? 32 ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ? 33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. 34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ. 35 ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು. 36 ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ:

"ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ;

ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ."8:36 ಕೀರ್ತನೆ 44:22

37 ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ. 38 ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, 39 ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.

Estes versículos te tocaram? Ore agora!

+581 estão orando agora.

Junte-se à corrente de oração.