ನೊವೊಮಿ ತನ್ನ ಗಂಡ ಮತ್ತು ಮಕ್ಕಳನ್ನು ಕಳೆದುಕೊಂಡದ್ದು
1 ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.
16 ಅದಕ್ಕೆ ರೂತಳು, "ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು. 17 ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ," ಎಂದಳು.
20 ಆಗ ಆಕೆಯು ಅವರಿಗೆ, "ನನ್ನನ್ನು ‘ನೊವೊಮಿ’1:20 ನೊವೊಮಿ ಎಂದರೆ ರಮಣೀಯ ಎಂದು ಕರೆಯಬೇಡಿರಿ. ಮಾರಾ1:20 ಮಾರಾ ಎಂದರೆ ಕಹಿ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು. 21 ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?" ಎಂದಳು.