20 ಆಗ ಆಕೆಯು ಅವರಿಗೆ, "ನನ್ನನ್ನು ‘ನೊವೊಮಿ’1:20 ನೊವೊಮಿ ಎಂದರೆ ರಮಣೀಯ ಎಂದು ಕರೆಯಬೇಡಿರಿ. ಮಾರಾ1:20 ಮಾರಾ ಎಂದರೆ ಕಹಿ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು. 21 ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?" ಎಂದಳು.