12 ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ," ಎಂದನು.
20 ನೊವೊಮಿ ತನ್ನ ಸೊಸೆಗೆ, "ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ," ಎಂದಳು. ಅನಂತರ ನೊವೊಮಿ ಅವಳಿಗೆ, "ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ2:20 ವಿಮೋಚಿಸತಕ್ಕ ಅಂದರೆ ತೀವ್ರ ತೊಂದರೆಯಲ್ಲಿರುವ ಸಂಬಂಧಿಯನ್ನು ರಕ್ಷಿಸುವ ಬಾಧ್ಯತೆ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ," ಎಂದಳು.