7 ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.
14 ಆಗ ಸ್ತ್ರೀಯರು ನೊವೊಮಿಗೆ, "ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.
17 ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, "ಒಬ್ಬ ಮಗನು ಹುಟ್ಟಿದ್ದಾನೆ," ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.
22 ಓಬೇದನು ಇಷಯನ ತಂದೆಯಾಗಿದ್ದನು;
ಇಷಯನು ದಾವೀದನ ತಂದೆಯಾಗಿದ್ದನು.