16 ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು,
"ಚೀಯೋನೇ, ನೀನು ಭಯಪಡಬೇಡ;
ನಿನ್ನ ಕೈಗಳು ಬಲಹೀನವಾಗದಿರಲಿ.
17 ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."