Publicidade

Salmos 1

1 ದುಷ್ಟರ ಆಲೋಚನೆಯಂತೆ ನಡೆಯದೆ,

ಪಾಪಿಗಳ ಮಾರ್ಗದಲ್ಲಿ ನಿಲ್ಲದೆ,

ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,

2 ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ,

ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.

3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು.

ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ,

ಅದರ ಎಲೆ ಉದುರುವುದೇ ಇಲ್ಲ.

ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.

4 ಆದರೆ ದುಷ್ಟರು ಹಾಗಲ್ಲ!

ಅವರು ಗಾಳಿ ಬಡಿದುಕೊಂಡು ಹೋಗುವ

ಹೊಟ್ಟಿನ ಹಾಗೆಯೇ ಇದ್ದಾರೆ.

5 ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು,

ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.

6 ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ;

ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.

Veja também

Publicidade
Bíblia Online Bíblia Online

Bíblia Online • Versão: 2026-06-15_21-32-39-