13 ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ?
"ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ," ಎಂದು
ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ;
ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ.
ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ;
ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.