15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ,
ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;
16 ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ;
ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.
17 ಆದರೆ ಯೆಹೋವ ದೇವರ ಪ್ರೀತಿಯು
ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು,
ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.
18 ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು
ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.