Pular para o conteúdo
Publicidade

ಕೀರ್ತನೆಗಳು 105

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ;

ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.

2 ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ;

ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

3 ದೇವರ ಪರಿಶುದ್ಧ ನಾಮವನ್ನು ಹೊಗಳಿರಿ;

ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.

4 ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,

ಅವರ ಮುಖವನ್ನು ಯಾವಾಗಲೂ ಹುಡುಕಿರಿ.

5 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ,

ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

6 ದೇವರ ಸೇವಕನಾದ ಅಬ್ರಹಾಮನ ಸಂತತಿಯೇ,

ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,

7 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ.

ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.

8 ದೇವರು ತಮ್ಮ ಒಡಂಬಡಿಕೆಯನ್ನೂ,

ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,

9 ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ,

ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.

10 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು;

ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:

11 "ನಾನು ನಿಮಗೆ ಕಾನಾನ್ ದೇಶವನ್ನು

ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು."

12 ಆಗ ಅವರು ಅಲ್ಪಸಂಖ್ಯಾತರೂ,

ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.

13 ಅವರು ಜನಾಂಗದಿಂದ ಜನಾಂಗಕ್ಕೂ

ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.

14 ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು.

ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:

15 "ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ,

ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ."

16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು.

ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.

17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು.

ಅವನೇ ದಾಸನಾಗಿ ಮಾರಲಾದ ಯೋಸೇಫನು.

18 ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು;

ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.

19 ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ

ಅವನು ದೇವರ ಮಾತಿನಿಂದ ಪರಿಶೋಧಿತನಾದನು.

20 ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು.

ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.

21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ,

ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,

22 ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ,

ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.

23 ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು;

ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.

24 ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ,

ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.

25 ತಮ್ಮ ಜನರನ್ನು ದ್ವೇಷಿಸುವಂತೆಯೂ,

ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.

26 ದೇವರು ತಮ್ಮ ಸೇವಕ ಮೋಶೆಯನ್ನೂ,

ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.

27 ಇವರು ದೇವರ ಸೂಚಕಕಾರ್ಯಗಳನ್ನೂ,

ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.

28 ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು.

ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?

29 ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು.

ಅವರ ಮೀನುಗಳನ್ನು ನಾಶಮಾಡಿದರು.

30 ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು;

ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.

31 ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ,

ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.

32 ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ

ಅವರ ದೇಶದಲ್ಲಿ ಬರಮಾಡಿದರು.

33 ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ

ಅವರ ಮೇರೆಗಳ ಮರಗಳು ಮುರಿದು ಬಿದ್ದವು.

34 ದೇವರು ಆಜ್ಞಾಪಿಸಲು ಮಿಡತೆಗಳೂ,

ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.

35 ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು;

ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.

36 ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ

ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.

37 ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು.

ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.

38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು;

ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.

39 ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ,

ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.

40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ,

ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.

41 ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು;

ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.

42 ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ,

ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.

43 ದೇವರು ತಮ್ಮ ಜನರನ್ನು ಆನಂದದಿಂದಲೂ,

ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.

44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು.

ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.

45 ದೇವರ ಸೂತ್ರಗಳನ್ನು ಕೈಗೊಂಡು,

ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು.

ಯೆಹೋವ ದೇವರನ್ನು ಸ್ತುತಿಸಿರಿ.

Todos os capítulos de ಕೀರ್ತನೆಗಳು 150
  1. 1
  2. 2
  3. 3
  4. 4
  5. 5
  6. 6
  7. 7
  8. 8
  9. 9
  10. 10
  11. 11
  12. 12
  13. 13
  14. 14
  15. 15
  16. 16
  17. 17
  18. 18
  19. 19
  20. 20
  21. 21
  22. 22
  23. 23
  24. 24
  25. 25
  26. 26
  27. 27
  28. 28
  29. 29
  30. 30
  31. 31
  32. 32
  33. 33
  34. 34
  35. 35
  36. 36
  37. 37
  38. 38
  39. 39
  40. 40
  41. 41
  42. 42
  43. 43
  44. 44
  45. 45
  46. 46
  47. 47
  48. 48
  49. 49
  50. 50
  51. 51
  52. 52
  53. 53
  54. 54
  55. 55
  56. 56
  57. 57
  58. 58
  59. 59
  60. 60
  61. 61
  62. 62
  63. 63
  64. 64
  65. 65
  66. 66
  67. 67
  68. 68
  69. 69
  70. 70
  71. 71
  72. 72
  73. 73
  74. 74
  75. 75
  76. 76
  77. 77
  78. 78
  79. 79
  80. 80
  81. 81
  82. 82
  83. 83
  84. 84
  85. 85
  86. 86
  87. 87
  88. 88
  89. 89
  90. 90
  91. 91
  92. 92
  93. 93
  94. 94
  95. 95
  96. 96
  97. 97
  98. 98
  99. 99
  100. 100
  101. 101
  102. 102
  103. 103
  104. 104
  105. 105
  106. 106
  107. 107
  108. 108
  109. 109
  110. 110
  111. 111
  112. 112
  113. 113
  114. 114
  115. 115
  116. 116
  117. 117
  118. 118
  119. 119
  120. 120
  121. 121
  122. 122
  123. 123
  124. 124
  125. 125
  126. 126
  127. 127
  128. 128
  129. 129
  130. 130
  131. 131
  132. 132
  133. 133
  134. 134
  135. 135
  136. 136
  137. 137
  138. 138
  139. 139
  140. 140
  141. 141
  142. 142
  143. 143
  144. 144
  145. 145
  146. 146
  147. 147
  148. 148
  149. 149
  150. 150

Estes versículos te tocaram? Ore agora!

+581 estão orando agora.

Junte-se à corrente de oração.