Publicidade

Salmos 113

1 ಯೆಹೋವ ದೇವರನ್ನು ಸ್ತುತಿಸಿರಿ.

ಯೆಹೋವ ದೇವರ ಸೇವಕರೇ,

ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.

2 ಇಂದಿನಿಂದ ಯುಗಯುಗಕ್ಕೂ

ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ.

3 ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ

ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.

4 ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು;

ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.

5 ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ?

ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.

6 ಆಕಾಶವನ್ನೂ, ಭೂಮಿಯನ್ನೂ

ತಗ್ಗಿಸಿಕೊಂಡು ನೋಡುತ್ತಾರೆ.

7 ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ,

ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.

8 ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ.

ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.

9 ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ,

ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ.

ಯೆಹೋವ ದೇವರನ್ನು ಸ್ತುತಿಸಿರಿ.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-