97 ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ!
ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.
98 ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು
ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.
99 ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ.
ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.
100 ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ
ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.