Publicidade

Salmos 12

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಶೆಮಿನಿಥ್ ಸ್ವರದೊಂದಿಗೆ ಹಾಡತಕ್ಕದ್ದು. ದಾವೀದನ ಕೀರ್ತನೆ.

1 ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ;

ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.

2 ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ;

ಅವರು ತಮ್ಮ ತುಟಿಯಿಂದ ಹೊಗಳಿ,

ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.

3 ಹೊಗಳಿಕೆಯ ಎಲ್ಲಾ ತುಟಿಗಳನ್ನೂ

ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.

4 ಅವರು ಹೀಗೆನ್ನುತ್ತಾರೆ, "ನಾವು ನಮ್ಮ ನಾಲಿಗೆಯಿಂದ ಜಯಿಸುವೆವು;

ನಮ್ಮ ತುಟಿಗಳೇ ನಮಗೆ ಸಂರಕ್ಷಣೆ

ನಮ್ಮ ಮೇಲೆ ಒಡೆಯನು ಯಾರು?"

5 "ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು

ನರಳಾಡುವುದರಿಂದಲೂ ನಾನು ಈಗಲೇ ಏಳುವೆನು," ಎಂದು ಯೆಹೋವ ದೇವರು ಹೇಳುತ್ತಾರೆ.

"ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು."

6 ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು.

ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ

ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.

7 ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು

ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,

8 ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ,

ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-