Publicidade

Salmos 121

ಯಾತ್ರಾ ಗೀತೆ.

1 ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;

ನನ್ನ ಸಹಾಯವು ಎಲ್ಲಿಂದ ಬರುವುದು?

2 ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ

ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.

3 ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ;

ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.

4 ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು

ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.

5 ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ;

ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.

6 ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ.

ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.

7 ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು,

ನಿಮ್ಮ ಪ್ರಾಣವನ್ನೂ ಕಾಪಾಡುವರು.

8 ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ

ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-