Publicidade

Salmos 126

ಯಾತ್ರಾ ಗೀತೆ.

1 ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ

ನಾವು ಕನಸು ಕಂಡವರ ಹಾಗಿದ್ದೆವು.

2 ಆಗ ನಮ್ಮ ಬಾಯಿ ನಗೆಯಿಂದಲೂ,

ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು;

ಆಗ ಜನಾಂಗಗಳು,

"ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ," ಎಂದು ಹೇಳಿದರು.

3 ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ;

ಆದಕಾರಣ ಸಂತೋಷಿಸುತ್ತಾ ಇದ್ದೇವೆ.

4 ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ

ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.

5 ಕಣ್ಣೀರಿನಿಂದ ಬಿತ್ತುವವರು,

ಆನಂದ ಗೀತದೊಡನೆ ಕೊಯ್ಯುವರು;

6 ಬಿತ್ತಲು ಬೀಜವನ್ನು ಹೊತ್ತುಕೊಂಡು

ಅಳುತ್ತಾ ಹೋಗುವವರು,

ತಮ್ಮ ಸಿವುಡುಗಳನ್ನು ಹೊತ್ತುಕೊಂಡು

ಆನಂದ ಗೀತದೊಡನೆ ತಿರುಗಿ ಬರುವರು.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-