Pular para o conteúdo
Publicidade

ಕೀರ್ತನೆಗಳು 13

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ.

1 ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ?

ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?

2 ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು?

ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ?

ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?

3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ.

ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

4 "ನಾನು ಅವನನ್ನು ಸೋಲಿಸಿದ್ದೇನೆ," ಎಂದು ನನ್ನ ಶತ್ರು ಹೇಳದಿರಲಿ,

ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.

5 ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ.

ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.

6 ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು,

ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.

Estes versículos te tocaram? Ore agora!

+581 estão orando agora.

Junte-se à corrente de oração.