Pular para o conteúdo
Publicidade

ಕೀರ್ತನೆಗಳು 131

ದಾವೀದನ ಯಾತ್ರಾ ಗೀತೆ.

1 ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ,

ನನಗೆ ಸೊಕ್ಕಿನ ಕಣ್ಣಿಲ್ಲ

ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ

ನಾನು ಕೈ ಹಾಕುವುದಿಲ್ಲ.

2 ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ

ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ.

ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ.

3 ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು.

ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು.

Estes versículos te tocaram? Ore agora!

+581 estão orando agora.

Junte-se à corrente de oração.