Pular para o conteúdo
Publicidade

ಕೀರ್ತನೆಗಳು 133

ದಾವೀದನ ಯಾತ್ರಾ ಗೀತೆ.

1 ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು!

ಎಷ್ಟೋ ರಮ್ಯವಾದದ್ದು!

2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ,

ಆರೋನನ ಗಡ್ಡದ ಮೇಲೆ ಇಳಿದು,

ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ

ಅಮೂಲ್ಯ ತೈಲದ ಹಾಗೆ ಇರುತ್ತದೆ.

3 ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ

ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ.

ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ,

ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.

Estes versículos te tocaram? Ore agora!

+581 estão orando agora.

Junte-se à corrente de oração.