Publicidade

Salmos 138

ದಾವೀದನ ಕೀರ್ತನೆ.

1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು;

ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು.

2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು,

ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ

ನಿಮ್ಮ ಹೆಸರನ್ನು ಕೊಂಡಾಡುವೆನು;

ನೀವು ನಿಮ್ಮ ವಾಕ್ಯವನ್ನು

ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ.

3 ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ.

ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.

4 ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು

ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ.

5 ಹೌದು, ಅವರು ಯೆಹೋವ ದೇವರ ಮಾರ್ಗಗಳ

ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ.

6 ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ;

ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.

7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ,

ನೀವು ನನ್ನನ್ನು ಬದುಕಿಸಿ,

ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ;

ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.

8 ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ;

ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು;

ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-