7 ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ?
ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?
8 ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ;
ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.
9 ಉದಯದ ರೆಕ್ಕೆಗಳನ್ನು ತೆಗೆದುಕೊಂಡು,
ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,
10 ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು,
ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.