Publicidade

Salmos 15

ದಾವೀದನ ಕೀರ್ತನೆ.

1 ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು?

ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?

2 ದೋಷವಿಲ್ಲದವರಾಗಿ ಜೀವಿಸಿ,

ನೀತಿಯನ್ನು ನಡೆಸಿ,

ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;

3 ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ,

ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ,

ಇತರರನ್ನು ನಿಂದಿಸುವುದೂ ಇಲ್ಲ;

4 ಅವರು ದುಷ್ಟರ ಸಹವಾಸ ಇಲ್ಲದವರೂ

ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ

ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ,

ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.

5 ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ;

ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು.

ಈ ರೀತಿಯಾಗಿ ಬಾಳುವವರು

ಎಂದಿಗೂ ಕದಲುವುದಿಲ್ಲ.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-