Pular para o conteúdo
Publicidade

ಕೀರ್ತನೆಗಳು 150

1 ಯೆಹೋವ ದೇವರಿಗೆ ಸ್ತೋತ್ರ!

ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ;

ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

2 ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ;

ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.

3 ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ,

ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.

4 ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ;

ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.

5 ತಾಳಗಳಿಂದ ದೇವರನ್ನು ಸ್ತುತಿಸಿರಿ;

ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.

6 ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.

ಯೆಹೋವ ದೇವರಿಗೆ ಸ್ತೋತ್ರ!

Estes versículos te tocaram? Ore agora!

+581 estão orando agora.

Junte-se à corrente de oração.