6 ಈಗ ನಾನು ಇದನ್ನು ಬಲ್ಲೆನು:
ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು.
ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ
ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.
7 ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ;
ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.
8 ಅವರು ಬಗ್ಗಿ ಬೀಳುತ್ತಾರೆ,
ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.