22 ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು;
ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.
23 ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ;
ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ;
ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.
24 ಏಕೆಂದರೆ ಸಂಕಟಪಡುವವನ ಸಂಕಟವನ್ನು
ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ;
ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ;
ಆದರೆ ಆತನು ಮೊರೆ ಇಡಲು, ಅವರು ಕೇಳಿದರು.