Publicidade

Salmos 24

ದಾವೀದನ ಕೀರ್ತನೆ.

1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ;

ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.

2 ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ

ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.

3 ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು?

ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು;

ವಂಚನೆಯಿಂದ ಮುಕ್ತನಾಗಿ,

ಮೋಸದಿಂದ ಆಣೆ ಇಡದೆಯೂ ಇರುವವನೇ.

5 ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು.

ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.

6 ಇಂಥವರೇ ದೇವರನ್ನು ಹುಡುಕುವ ಸಂತತಿಯು;

ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.

7 ದ್ವಾರಗಳೇ ತಲೆ ಎತ್ತಿ ನೋಡಿರಿ,

ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;

ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

8 ಈ ಮಹಿಮೆಯ ಅರಸ ಯಾರು?

ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ.

ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.

9 ದ್ವಾರಗಳೇ, ತಲೆ ಎತ್ತಿ ನೋಡಿರಿ,

ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ;

ಮಹಿಮೆಯ ಅರಸ ಒಳಗೆ ಬರಲಿದ್ದಾರೆ.

10 ಮಹಿಮೆಯ ಅರಸ ಯಾರು?

ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ.

ಇವರೇ ಮಹಿಮೆಯ ಅರಸರು.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-