Publicidade

Salmos 26

ದಾವೀದನ ಕೀರ್ತನೆ.

1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ,

ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ;

ನಾನು ಯೆಹೋವ ದೇವರಲ್ಲಿ ಕದಲದೆ

ಭರವಸೆ ಇಟ್ಟಿದ್ದೇನೆ.

2 ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ;

ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.

3 ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ;

ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.

4 ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ;

ವಂಚಕರ ಸಂಗಡ ನಾನು ಹೋಗುವುದಿಲ್ಲ.

5 ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ;

ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.

6 ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು,

ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,

7 ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ

ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.

8 ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ,

ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.

9 ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ,

ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.

10 ಅವರ ಕೈಗಳಲ್ಲಿ ಕೇಡು ಇದೆ;

ಅವರ ಬಲಗೈ ಲಂಚಗಳಿಂದ ತುಂಬಿದೆ.

11 ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ;

ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.

12 ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ;

ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-