Publicidade

Salmos 28

ದಾವೀದನ ಕೀರ್ತನೆ.

1 ಯೆಹೋವ ದೇವರೇ,

ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ.

ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ,

ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ

ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.

2 ನಾನು ನಿಮಗೆ ಮೊರೆಯಿಡುವಾಗ,

ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ

ಸ್ಥಳದ ಕಡೆಗೆ ಎತ್ತುವಾಗ

ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.

3 ದುಷ್ಟರ ಸಂಗಡವೂ ಅಪರಾಧ ಮಾಡುವವರ

ಸಂಗಡವೂ ನನ್ನನ್ನು ಎಳೆಯಬೇಡಿರಿ;

ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ;

ಆದರೆ ಕೇಡು ಅವರ ಹೃದಯದಲ್ಲಿ ಇದೆ.

4 ಅವರ ಕೃತ್ಯಗಳ ಪ್ರಕಾರವಾಗಿಯೂ,

ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ;

ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ,

ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.

5 ಅವರು ಯೆಹೋವ ದೇವರ ಕೃತ್ಯಗಳನ್ನೂ,

ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ;

ಆದ್ದರಿಂದ ದೇವರು ಅವರನ್ನು

ವೃದ್ಧಿಗೊಳಿಸದೆ ದಂಡಿಸುವರು.

6 ಯೆಹೋವ ದೇವರಿಗೆ ಸ್ತುತಿಯುಂಟಾಗಲಿ;

ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.

7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ;

ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು;

ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು;

ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.

8 ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ;

ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.

9 ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ;

ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-