1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ!
ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!
2 "ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ," ಎಂದು
ಅನೇಕರು ನನ್ನ ಬಗ್ಗೆ ಹೇಳುತ್ತಾರೆ.
3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ,
ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ3:3 ತಲೆ ಮೇಲೆತ್ತುವವರೂ ಇದರ ಅರ್ಥ ನೀವು ಜಯವನ್ನೂ ಮಹಾ ಘನತೆಯನ್ನೂ ಕೊಡುವವರಾಗಿದ್ದೀರಿ ಆಗಿದ್ದೀರಿ.
4 ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು,
ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.
5 ನಾನು ಮಲಗಿ ನಿದ್ರಿಸುವೆನು;
ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.
6 ಸಾವಿರಾರು ಜನರು ನನಗೆ ವಿರೋಧವಾಗಿ
ನನ್ನ ಸುತ್ತುವರಿದರೂ ನಾನು ಭಯಪಡೆನು.