4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
6 ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ
ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.
17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
18 ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
19 ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ;
ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.