5 ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು;
ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:
6 ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು,
ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.
7 ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.