Publicidade

Salmos 39

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆದೂತೂನನಿಗಾಗಿ, ದಾವೀದನ ಕೀರ್ತನೆ.

1 "ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು,

ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು.

ದುಷ್ಟರು ನನ್ನ ಮುಂದೆ ಇರುವಾಗ

ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,"

ಎಂದು ತೀರ್ಮಾನಿಸಿಕೊಂಡೆನು.

2 ಆದ್ದರಿಂದ ನಾನು ಮೌನವಾಗಿದ್ದೆನು.

ಒಳ್ಳೆಯದನ್ನು ಸಹ ನಾನು ಆಡದೆ ಸುಮ್ಮನಿದ್ದೆನು.

ಆದರೆ ನನ್ನ ವ್ಯಥೆಯು ಅಧಿಕವಾಯಿತು.

3 ನನ್ನ ಹೃದಯವು ಸಂತಾಪದಿಂದ ಕಾವೇರಿತು.

ನಾನು ಧ್ಯಾನವು ಬೆಂಕಿಯಂತೆ ಉರಿಯಿತು.

ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು:

4 "ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ

ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ,

ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ.

5 ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ.

ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ;

ಪ್ರತಿ ಮನುಷ್ಯನ ಜೀವನ

ಬರೀ ಉಸಿರೇ.

6 "ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ;

ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ;

ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.

7 "ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು?

ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ.

8 ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ;

ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ.

9 ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ;

ಇದನ್ನು ಮಾಡಿದವರು ನೀವೇ.

10 ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ;

ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.

11 ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ

ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ.

ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.

12 "ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ;

ನನ್ನ ಮೊರೆಗೆ ಕಿವಿಗೊಡಿರಿ;

ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ;

ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ;

ನಾನೂ ಪ್ರವಾಸಿಯಾಗಿದ್ದೇನೆ.

13 ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ

ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ."

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-