3 ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ;
ಅವರ ತೋಳು ಅವರಿಗೆ ಜಯ ತರಲಿಲ್ಲ;
ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು.
ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.
4 ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ.
ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.