Publicidade

Salmos 46

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯನ ಪುತ್ರರ ಸಂಯೋಜನೆ. ಅಲಾಮೊತ್ ರಾಗವನ್ನು ಆಧಾರಿಸಿದ ಒಂದು ಗೀತೆ.

1 ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;

ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.

2 ಆದ್ದರಿಂದ ಭೂಮಿಯು ಕಂಪಿಸಿದರೂ

ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,

3 ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ,

ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.

4 ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ

ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.

5 ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು;

ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.

6 ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ.

ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.

7 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ.

ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.

8 ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ.

ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.

9 ದೇವರು ಯುದ್ಧಗಳನ್ನು ಭೂಮಿಯ

ಅಂತ್ಯದವರೆಗೆ ನಿಲ್ಲಿಸುತ್ತಾರೆ.

ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ.

ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.

10 "ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ;

ಜನಾಂಗಗಳಲ್ಲಿ ಉನ್ನತನಾಗಿರುವೆನು;

ಭೂಮಿಯಲ್ಲಿ ಉನ್ನತನಾಗಿರುವೆನು," ಎಂದು ಯೆಹೋವ ದೇವರು ಹೇಳುತ್ತಾರೆ.

11 ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ;

ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.

Veja também

Publicidade
Bíblia Online Bíblia Online

Bíblia Online • Versão: 2026-06-16_18-40-07-