9 ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ;
ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.
10 ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
11 ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.