1 ದೇವರೇ ಕರುಣಿಸು,
ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ.
ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.
3 ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
4 ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
8 ನನ್ನ ಗೋಳಾಟವನ್ನು ಎಣಿಕೆ ಮಾಡಿರಿ,
ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ,
ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
11 ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ.
ಮಾನವನು ನನಗೇನು ಮಾಡುವನು?