Pular para o conteúdo
Publicidade

ಕೀರ್ತನೆಗಳು 78:1-4

OKCV Kannada Contemporary Version

1 ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ;

ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.

2 ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು.

ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.

3 ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.

ನಮ್ಮ ಪಿತೃಗಳು ನಮಗೆ ವಿವರಿಸಿದರು.

4 ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ

ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು.

ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.

Em outras traduções

  1. IRVKAN Indian Revised Version (IRV) - Kannada - 2019

    1 ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ;

    ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.

    2 ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.

    ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.

    3 ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು,

    ಅವರ ಸಂತಾನದವರಿಗೆ ಮರೆಮಾಡದೆ,

    4 ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,

    ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.