Pular para o conteúdo
Publicidade

ಕೀರ್ತನೆಗಳು 84

ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಗಿತ್ತೀ ರಾಗದಿಂದ ಹಾಡತಕ್ಕದ್ದು. ಕೋರಹೀಯರ ಕೀರ್ತನೆ.

1 ಸೇನಾಧೀಶ್ವರ ಯೆಹೋವ ದೇವರೇ,

ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!

2 ಯೆಹೋವ ದೇವರ ಅಂಗಳಗಳಲ್ಲಿ ಸೇರಲು

ನನ್ನ ಪ್ರಾಣವು ಬಯಸಿ ಕುಂದುತ್ತದೆ.

ನನ್ನ ಹೃದಯವೂ, ನನ್ನ ಶರೀರವೂ

ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.

3 ಓ ಸೇನಾಧೀಶ್ವರ ಯೆಹೋವ ದೇವರೇ,

ನನ್ನ ಅರಸರಾಗಿರುವವರೇ, ನನ್ನ ದೇವರೇ,

ಗುಬ್ಬಿಯು ಮನೆಯನ್ನೂ,

ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ

ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.

4 ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು;

ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.

5 ನಿಮ್ಮಲ್ಲಿ ಯಾರು ಬಲಹೊಂದಿರುವರೋ,

ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.

6 ಬಾಕಾ84:6 ಬಾಕಾ ಇದು ಒಂದು ಬಗ್ಗೆ ಮರುಭೂಮಿಯಲ್ಲಿ ಬೆಳೆಯುವ ಗಿಡ ಮತ್ತು ಕೆಲವು ಪ್ರತಿಗಳಲ್ಲಿ ಕಣ್ಣೀರು ಎಂದು ಅರ್ಥ ತಗ್ಗನ್ನು ದಾಟುವಾಗ

ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ.

ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.

7 ಅವರು ಬಲದಿಂದ ಬಲಕ್ಕೆ ಸಾಗಿ,

ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.

8 ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ.

ಯಾಕೋಬನ ದೇವರೇ, ಕಿವಿಗೊಡಿರಿ.

9 ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ.

ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.

10 ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು

ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ.

ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ

ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.

11 ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ.

ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ.

ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ

ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.

12 ಸೇನಾಧೀಶ್ವರ ಯೆಹೋವ ದೇವರೇ,

ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.

Estes versículos te tocaram? Ore agora!

+581 estão orando agora.

Junte-se à corrente de oração.