ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. "ಪುತ್ರನ ಮರಣದ" ರಾಗ. ದಾವೀದನ ಕೀರ್ತನೆ.
1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು;
ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.
2 ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು;
ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.