ಕೀರ್ತನೆ. ಸಬ್ಬತ್ ದಿನದ ಗೀತೆ.
1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು.
ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.
2 ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ
ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.
3 ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ
ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.