Pular para o conteúdo
Publicidade

ಕೀರ್ತನೆಗಳು 93

1 ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ.

ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ.

ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.

2 ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ.

ಯುಗಯುಗದಿಂದ ನೀವು ಇದ್ದೀರಿ.

3 ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ.

ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ.

ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.

4 ಮಹಾಸಾಗರದ ಶಬ್ದಕ್ಕಿಂತಲೂ,

ಸಮುದ್ರದ ಬಲವಾದ ಅಲೆಗಳಿಗಿಂತಲೂ

ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.

5 ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು.

ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ

ನಿಮ್ಮ ಆಲಯವನ್ನು ಅಲಂಕರಿಸುತ್ತದೆ.

Estes versículos te tocaram? Ore agora!

+581 estão orando agora.

Junte-se à corrente de oração.