Publicidade

Salmos 97

1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ;

ದ್ವೀಪಗಳ ಸಮೂಹವು ಸಂತೋಷಪಡಲಿ.

2 ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ;

ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.

3 ಬೆಂಕಿಯು ಅವರ ಮುಂದೆ ಹೋಗಿ

ಅವರ ವೈರಿಗಳನ್ನು ಸುತ್ತಲೂ ದಹಿಸುವುದು.

4 ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ;

ಭೂಮಿಯು ಕಂಡು ನಡುಗುತ್ತದೆ.

5 ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ,

ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.

6 ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ;

ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.

7 ವಿಗ್ರಹಗಳನ್ನು ಪೂಜಿಸಿ,

ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ;

ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!

8 ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು

ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು;

ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.

9 ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ;

ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.

10 ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು;

ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ,

ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.

11 ನೀತಿವಂತನಿಗೋಸ್ಕರ ಬೆಳಕೂ,

ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.

12 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ;

ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.

Veja também

Publicidade
Bíblia Online Bíblia Online

Bíblia Online • Versão: 2026-06-16_06-50-08-