ಕಷ್ಟಗಳು ಮತ್ತು ಶೋಧನೆಗಳು
2 ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ. 3 ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ. 4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.
22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23 ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು. 24 ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.