ಪಕ್ಷಪಾತವನ್ನು ಕುರಿತದ್ದು
1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು. 2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು 3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, "ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ," ಎಂತಲೂ ಆ ಬಡವನಿಗೆ, "ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ," ಎಂತಲೂ ಹೇಳಿದರೆ, 4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?