Pular para o conteúdo
Publicidade

ಯಾಕೋಬನು 2:1-9

ಪಕ್ಷಪಾತವನ್ನು ಕುರಿತದ್ದು

1 ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು. 2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು 3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, "ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ," ಎಂತಲೂ ಆ ಬಡವನಿಗೆ, "ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ," ಎಂತಲೂ ಹೇಳಿದರೆ, 4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?

5 ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? 6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7 ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?

8 "ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!"2:8 ಯಾಜಕ 19:18 ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ. 9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.

Estes versículos te tocaram? Ore agora!

+581 estão orando agora.

Junte-se à corrente de oração.