ನಂಬಿಕೆಯೂ ಸತ್ಕಾರ್ಯವೂ
14 ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? 15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ, 16 ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, "ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ," ಎಂದು ಹೇಳಿದರೆ ಪ್ರಯೋಜನವೇನು? 17 ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ.
18 ಆದರೆ ಒಬ್ಬ ಮನುಷ್ಯನು, "ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ," ಎಂದು ವಾದಿಸಬಹುದು.
ಅಂಥವನಿಗೆ, "ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ," ಎಂದು ಹೇಳಬಹುದು. 19 ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
20 ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು2:20 ಕೆಲವು ಪ್ರತಿಗಳಲ್ಲಿ ವ್ಯರ್ಥವಾದದ್ದೆಂದು ಇದೆ. ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ? 21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? 22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ. 23 ಹೀಗೆ, "ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,"2:23 ಆದಿ 15:6 ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು. 24 ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.
25 ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ? 26 ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.